ads

Search This Blog

Saturday, 21 December 2024

ಗೂಂಡಾಗಳು ಸುವರ್ಣ ಸೌಧದೊಳಕ್ಕೆ ಹೇಗೆ ಬಂದರು? ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ? -ಎಚ್.ಡಿ ಕುಮಾರಸ್ವಾಮಿ

 ಬೆಂಗಳೂರು: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದನ್ನು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.


ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ


ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ ಎಂದಿದ್ದಾರೆ.

ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕರ್ನಾಟಕ ಕಾಂಗ್ರೆಸ್ ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ.., ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ... ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ? ಎಂದು ಪ್ರಶ್ನಿಸಿದ್ದಾರೆ. ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್'ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ. ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...