ಬೆಂಗಳೂರಿನ ಸರ‍್ವೆ ಕಲ್ಚರಲ್ ಅಕಾಡೆಮಿ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಕೊಡಮಾಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಡಾ. ಅಮ್ಮಸಂದ್ರ ಸುರೇಶ್ ಭಾಜನರಾಗಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಮ್ಮಸಂದ್ರ ಸುರೇಶ್ ಅವರು ಇದುವರೆಗೂ ಇಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ ಮತ್ತು ರಾಜ್ಯ ಮಟ್ಟದ ಪತ್ರಿಕೆಗಳಿಗೆ ಅಂಕಣಗಳನ್ನು ಬರೆಯುತ್ತಿದ್ದಾರೆ. ಪ್ರಶಸ್ತಿಯನ್ನು ಇದೇ ತಿಂಗಳ ೨೭ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು ಎಂದು ಅಕಾಡೆಮಿಯ ಸ್ಥಾಪಕ ಅಧ್ಯಕ್ಷ ರಮೇಶ್ ಸರ‍್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment