ads

Search This Blog

Thursday, 19 December 2024

ಅಶ್ಲೀಲ ಪದ ಬಳಕೆ: ಬಿಜೆಪಿ ಸಿಟಿ ರವಿ ಬಂಧನ

 ಅಶ್ಲೀಲ ಪದ ಬಳಕೆ: ಬಿಜೆಪಿ ಸಿಟಿ ರವಿ ಬಂಧನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಅವಾಚ್ಯಪದ ಬಳಕೆ ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...