ಬೆಂಗಳೂರು : ಮನುಷ್ಯ ಆರೋಗ್ಯಕರ ಮನಸ್ಸನ್ನು ಹೊಂದಿದ್ದಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುವುದರಲ್ಲಿ ಸಂದೇಹವಿಲ್ಲ. ಆಧುನಿಕ ಮತ್ತು ಪಾರಂಪರಿಕ ವೈದ್ಯ ಪದ್ದತಿಗಳ ಮಿಶ್ರಣದಿಂದಾಗಿ ಮಾನವನ ಮಾನಸಿಕ ಕಾಯಿಲೆಗಳಿಗೆ ನೀಡುವ ಚಿಕಿತ್ಸೆ ಫಲಕಾರಿಯಾಗುವುದು ಎಂದು ಭಾರತದ ಗೌರವನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ತಿಳಿಸಿದರು.
ಇಂದು ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ನಿಮ್ಹಾನ್ಸ್ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಹೆಮ್ಮೆ ತಂದಿದೆ. ಇಡೀ ದೇಶದಲ್ಲಿಯೇ ಇದು ಒಂದು ಉತ್ಕøಷ್ಟ ಸಂಸ್ಥೆಯಾಗಿ ಹೆಸರು ಮಾಡಿದೆ ಎಂದರು.
ಶಿಕ್ಷಣ, ಸಂಶೋಧನೆ, ರೋಗಿಗಳ ಚಿಕಿತ್ಸೆ, ಪುರ್ನವಸತಿ ಕಲ್ಪಿಸುವ ನಿಟ್ಟಿನಲ್ಲಿ ನಿಮಾನ್ಸ್ ಸಂಸ್ಥೆಯು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿದೆ. ದೇಶದಲ್ಲಿ 53 ಟೆಲಿ ಮಾನಸ್ ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ನಿಮ್ಹಾನ್ಸ್ಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ನೆಲ್ಸನ್ ಮಂಡೇಲಾ ಪ್ರಶಸ್ತಿ ಸಹ ಲಭಿಸಿರುವುದು ಸಂತೋಷಕರ ವಿಷಯವಾಗಿದೆ ಎಂದರು.
ಯೋಗ ಹಾಗೂ ಆರ್ಯುವೇದ ಪದ್ದತಿಗಳು ಮಾನಸಿಕ ವ್ಯಾಧಿಗಳನ್ನು ಹತೋಟಿಗೆ ತರುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿತ್ತಿವೆ. ನಾವು ಮನಸ್ಸನ್ನು ಸಮಚಿತ್ತದಿಂದ ಇಟ್ಟುಕೊಳ್ಳಬೇಕು. ಇಂದು ಗೃಹಣಿಯರು, ಉದ್ಯೋಗಸ್ಥರು, ವಿದ್ಯಾರ್ಥಿಗಳು, ವಯೋವೃದ್ಧರು ತಮ್ಮದೇ ಆದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದಾರೆ. ಕೋವಿಡ್ – 19ರ ನಂತರ ಜನರಿಗೆ ಮಾನಸಿಕ ಒತ್ತಡಗಳು ಹೆಚ್ಚಿವೆ. ನಿಮಾನ್ಸ್ನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಲ್ಲಿ ಹೆಚ್ಚು ಮಹಿಳೆಯರೇ ಇರುವುದು ಸಂತಸದ ಸಂಗತಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಿಮ್ಹಾನ್ಸ್ನಲ್ಲಿ ಕೇಂದ್ರೀಯ ಪ್ರಯೋಗಾಲಯ ಸಂಕೀರ್ಣ, ವಿಶೇಷ ಮನೋಶಾಸ್ತ್ರ ಬ್ಲಾಕ್, ಭೀಮಾ ಹಾಸ್ಟೆಲ್, ಅತ್ಯಾಧುನಿಕ ರೋಗ ಪತ್ತೆ ಸೌಲಭ್ಯಗಳ ಸುಧಾರಿತ ಐಟಿಎಂ, ಆರ್ಐ ಸ್ಕ್ಯಾನರ್ ಮತ್ತು ಅತ್ಯಾಧುನಿಕ ಡಿ.ಎನ್.ಎ ವ್ಯವಸ್ಥೆ ಘಟಕ ಮುಂತಾದುವುಗಳನ್ನು ಗೌರವಾನ್ವಿತ ರಾಷ್ಟ್ರಪತಿಗಳು ಉದ್ಘಾಟಿಸಿದರು.
ಮಾನಸಿಕ ಆರೋಗ್ಯ ಹಾಗೂ ನರ ರೋಗಗಳ ಕ್ಷೇತ್ರದಲ್ಲಿ ನಿಮಾನ್ಸ್ ಸಂಸ್ಥೆಯಿಂದ ಅಪರಿಮಿತ ಸಾಧನೆ – ಮುಖ್ಯಮಂತ್ರಿ ಸಿದ್ದರಾಮಯ್ಯ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ನಿಮ್ಹಾನ್ಸ್ ಐದು ದಶಕಗಳಿಂದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಪರಿಮಿತ ಸಾಧನೆ ಮಾಡಿದೆ, ನಿಮಾನ್ಸ್ ಮಾನಸಿಕ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೀಸಲಾದ ಭಾರತದ ಪ್ರಪ್ರಥಮ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಾನಸಿಕ ರೋಗ, ರೋಗಿ ಹಾಗೂ ಆರೈಕೆಯ ಕುರಿತಾದ ಜನರ ನಕಾರಾತ್ಮಕ ದೃಷ್ಟಿಕೋನವನ್ನು ನಿವಾರಿಸುವಲ್ಲಿ ನಿಮಾನ್ಸ್ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಮೆದುಳು, ನರಗಳ ಖಾಯಿಲೆಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಲ್ಲಿ ನಿಮಾನ್ಸ್ ಸಂಸ್ಥೆ ಹೆಸರುವಾಸಿಯಾಗಿದೆ. ರಾಜ್ಯದಲ್ಲಿ ಟೆಲಿ ಮಾನಸ್ ಸಹಾಯವಾಣಿ ಯಶಸ್ವಿಯಾಗಿದ್ದು, ದೂರವಾಣಿ ಆಪ್ತ ಸಮಾಲೋಚನೆ ಮೂಲಕ ಸುಮಾರು 17 ಲಕ್ಷ ಜನರು ಪ್ರಯೋಜನ ಪಡೆದಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಸಹ ನರರೋಗ ಮತ್ತು ಇತರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ತಜ್ಞರ ಸೇವೆಯನ್ನು ವಿಸ್ತರಿಸಲಾಗಿದೆ. ಸರ್ಕಾರವು ನಿಮ್ಹಾನ್ಸ್ ಸಂಸ್ಥೆಯ ಕಾರ್ಯನಿರ್ವಹಣೆಗಾಗಿ ಪ್ರತಿ ವರ್ಷ 137 ಕೋಟಿ ರೂಪಾಯಿಗಳನ್ನು ಒದಗಿಸುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಲದ ಮರ ಪೌಂಡೇಷನ್ ಸಹಯೋಗದಲ್ಲಿ ನಗರದ ಸಿ.ವಿ. ರಾಮನ್ ಆಸ್ಪತ್ರೆಯಲ್ಲಿ 25 ಹಾಸಿಗೆ ಸಾಮಥ್ರ್ಯದ ತುರ್ತು ಚಿಕಿತ್ಸೆ ಮತ್ತು ರಿಕವರಿ ಕೇಂದ್ರದಲ್ಲಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಬಡವರಿಗೆ ಪುನರ್ವಸತಿ ಸ್ಥಾಪಿಸಲಾಗಿದೆ. ಜಿಲ್ಲಾ ಉಪ ಕೇಂದ್ರ ಆಸ್ಪತ್ರೆಗಳಲ್ಲಿ ಮನೋ ಚೈತನ್ಯ ಮಾನಸಿಕ ಆರೋಗ್ಯ ಚಿಕಿತ್ಸಾ ಕಾರ್ಯಕ್ರಮಗಳ ಮೂಲಕ 146 ತಾಲ್ಲೂಕುಗಳ 5 ಲಕ್ಷ ಜನರು ಪ್ರಯೋಜನ ಪಡೆದಿದ್ದಾರೆ. ಒಟ್ಟನಲ್ಲಿ ಈ ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಜನರ ಮಾನಸಿಕ ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ ನಿಮಾನ್ಸ್ನಿಂದ ಹೊಸ ಮೈಲುಗಲ್ಲು ಸೃಷ್ಟಿ - ಜೆ.ಪಿ. ನಡ್ಡಾ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವರಾದ ಜಗತ್ ಪ್ರಕಾಶ್ ನಡ್ಡಾ ಅವರು ಮಾತನಾಡಿ ನಿಮ್ಹಾನ್ಸ್ ಜನರಿಗೆ ಮಾನಸಿಕ ರೋಗ ಚಿಕಿತ್ಸೆಗೆ ಸಂಬಂಧಿಸಿದಂತೆ ಹೊಸ ಮೈಲುಗಲ್ಲು ಸೃಷ್ಟಿಸಿದೆ. ದೇಶದ ಉನ್ನತ ಮಟ್ಟದ 200 ಆಸ್ಪತ್ರೆಗಳಲ್ಲಿ ನಿಮಾನ್ಸ್ ಸಹ ಒಂದು ಸ್ಥಾನ ಅಲಂಕರಿಸಿದೆ. ಲಕ್ಷಾಂತರ ಜನರು ಇಲ್ಲಿ ಮಾನಸಿಕ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ಉತ್ತಮ ಪ್ರಯೋಗಾಲಯ ಮತ್ತು ಅತ್ಯಾಧುನಿಕ ಚಿಕಿತ್ಸೆಗಳು ಜನರಿಗೆ ಲಭ್ಯವಾಗಿದೆ. ದೇಶದಲ್ಲಿಯೇ ಈ ಸಂಸ್ಥೆ ಹೆಸರು ಮಾಡಿದ್ದು, ಮುಂದೆ ಜಾಗತಿಕ ಮಟ್ಟದಲ್ಲೂ ಸಹ ಗುರುತಿಸಲ್ಪಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಸಂಸದರಾದ ತೇಜಸ್ವಿ ಸೂರ್ಯ, ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಪಿ.ಸಿ.ಮೋಹನ್, ಡಾ. ಸಿ.ಎನ್. ಮಂಜುನಾಥ್, ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಸೇರಿದಂತೆ ಗಣ್ಯರುಗಳು ಹಾಗೂ ನಿಮ್ಹಾನ್ಸ್ ಸಮಸ್ಥೆಯ ಹಿರಿಯ ಅಧಿಕಾರಿಗಳು, ವೈದ್ಯರುಗಳು ಉಪಸ್ಥಿತರಿದ್ದರು.
ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಆತ್ಮೀಯವಾಗಿ ಬೀಳ್ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಜನವರಿ 03 ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮಾನ್ಸ್) ಯಿಂದ ಆಯೋಜಿಸಲಾದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಪ್ರಯಾಣಿಸಿದರು.
ಗೌರವಾನ್ವಿತ ರಾಷ್ಟ್ರಪತಿಗಳನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಬೀಳ್ಕೊಟ್ಟರು
ಈ ಸಮಯದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಏರ್ ಮಾರ್ಷಲ್ ನಾಗೇಶ್ ಕಪೂರ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಲೆಫ್ಟಿನೆಂಟ್ ಜನರಲ್ ಜಿತೇಂದ್ರ ಕುಮಾರ್ ಗೇರಾ, ಕರ್ನಾಟಕ ಪೆÇಲೀಸ್ ಮಹಾನಿರ್ದೇಶಕರಾದ ಡಾ. ಅಲೋಕ್ ಮೋಹನ್, ಬೆಂಗಳೂರು ನಗರ ಪೆÇಲೀಸ್ ಆಯುಕ್ತರಾದ ಬಿ. ದಯಾನಂದ್, ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್. ಜಿ ಸೇರಿದಂತೆ ಇತರೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
No comments:
Post a Comment