ads

Search This Blog

Saturday, 4 January 2025

ಕೆಕೆಆರ್‌ಡಿಬಿ ಕಾಮಗಾರಿಗಳನ್ನು ಯುದ್ಧೊಪಾದಿಯಲ್ಲಿ ಪೂರ್ಣಗೊಳಿಸಿ -ಸಚಿವ ಈಶ್ವರ ಖಂಡ್ರೆ

 ಬೀದರ :- ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿAದ ಬೀದರ ಜಿಲ್ಲೆಯಲ್ಲಿ ಕೈಗೊಂಡ ಎಲ್ಲ ಕಾಮಗಾರಿಗಳನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು.


 ಇಂದು ಬೀದರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಂಡ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 ಕಳೆದ 2018-19 ರಿಂದ 2023 ರವರೆಗೆ ವಿವಿಧ ಇಲಾಖೆಗಳಲ್ಲಿ ಕೆಕೆಆರ್‌ಡಿಬಿ ಕಾಮಗಾರಿಗಳು ಅಪೂರ್ಣ ಹಂತದಲ್ಲಿವೆ. ಮೆಕ್ರೋ ಹಾಗೂ ಮೈಕ್ರೋ ಯೋಜನೆಯ ಎಲ್ಲ ಕಾಮಗಾರಿಗಳನ್ನು ಸಂಬAಧಿಸಿದ ಅಧಿಕಾರಿಗಳು ಈ ಮಾರ್ಚ ಒಳಗಾಗಿ ಪೂರ್ಣಗೊಳಿಸುವಂತೆ ಸಚಿವರು ಖಡಕ್ ಸೂಚನೆ ನೀಡಿದರು.
 ಈವರೆಗೆ ಒಟ್ಟು 3564 ಕಾಮಗಾರಿಗಳು ಪೂರ್ಣಗೊಂಡಿದ್ದು, 708 ಕಾಮಗಾರಿಗಳು ಪ್ರಗತಿಯಲ್ಲಿವೆ. 436 ಇನ್ನು ಆರಂಭಿಸಬೇಕಿದೆಯೆAದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಎಲ್ಲ ಕಾಮಗಾರಿಗಳ ಗುಣಮಟ್ಟ ಥರ್ಡ ಪಾರ್ಟಿ ಮೂಲಕ ಪರೀಕ್ಷೆ ಮಾಡುವಂತೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರಿಗೆ ಸಚಿವರು ಸೂಚಿಸಿದರು.
 ವೈದ್ಯಕೀಯ ನಿರ್ದೇಶನಾಲಯಕ್ಕೆ 2020 ರಲ್ಲಿಯೇ 11 ಕೋಟಿ ನೀಡಿದ್ದು ಈವರೆಗೆ ಖರ್ಚು ಮಾಡದೇ ಇದ್ದು ಹಣ ಮರಳಿಸಲು ಪತ್ರ ಬರೆಯುವಂತೆ ಸಚಿವರು ಸೂಚಿಸಿದರು.
 ನಿರ್ಮಿತಿ ಕೇಂದ್ರದಿAದ 118 ಅಂಗನವಾಡಿ ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದವುಗಳು ಪ್ರಗತಿಯಲ್ಲಿವೆ. ಶಿಕ್ಷಣ ಇಲಾಖೆಗೆ ಮೈಕ್ರೋ ಯೋಜನೆಯಡಿ 2023 ರಲ್ಲಿ 37 ಕಾಮಗಾರಿಗಳಿಗೆ 4.65 ಕೋಟಿ ರೂ. ನೀಡಲಾಗಿದ್ದು ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರು.
 ಜಿಲ್ಲೆಯಲ್ಲಿ ಪ್ಲೊರೈಡ್ ಹಾಗೂ ನೈಟ್ರೆಟ್ ರಸಾಯನ ಅಂಶಗಳು ಹೆಚ್ಚಿರುವ ಗ್ರಾಮಗಳ ಪಟ್ಟಿ ಮಾಡಿ ವರದಿ ಪಡೆಯುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಲಾಯಿತು. ಅಗತ್ಯವಿದ್ದಲ್ಲಿ ಆರ್.ಓ.ಪ್ಲಾಂಟ್ ಅಳವಡಿಸಿ ಈ ರಸಾಯನಿಕ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿದ್ದರೆ ಮಾತ್ರ ಆರ್.ಓ.ಪ್ಲಾಂಟ್‌ಗಳನ್ನು ಹಾಕಬಹುದು. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ವರದಿ ತರಿಸಿಕೊಳ್ಳುವಂತೆ ಸಚಿವರು ಸೂಚಿಸಿದರು.
 ಆರೋಗ್ಯ ಇಲಾಖೆಗೆ 11 ಅಂಬುಲೆನ್ಸ್ಗಳನ್ನು ಒದಗಿಸಲಾಗಿದ್ದು, 11 ಚಾಲಕರನ್ನು ಸಹ ಕೆಕೆಆರ್‌ಡಿಬಿ ಅಡಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದೆಂದು ಸಚಿವರು ತಿಳಿಸಿದರು. ಎಲ್ಲ ಕೆಕೆಆರ್‌ಡಿಬಿ ಕಾಮಗಾರಿಗಳನ್ನು ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರಲ್ಲದೇ ಜಿಲ್ಲಾಧಿಕಾರಿಗಳು ಹಾಗೂ ಸಿಇಓ ಈ ಕಾಮಗಾರಿಳ ಗುಣಮಟ್ಟ ಪರೀಕ್ಷಿಸುವಂತೆ ತಿಳಿಸಿದರು.
ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಿಸುವ ಕ್ರಮ: ಇದೇ ಮಾರ್ಚ.21 ರಂದು ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಜರುಗಲಿದ್ದು, ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ಹಾಗೂ ಜಿಲ್ಲೆಯ ರ‍್ಯಾಂಕ್ ಹೆಚ್ಚಳಕ್ಕೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ವಿಶೇಷ ಕಾರ್ಯಾಗಾರ ತರಬೇತಿ ತರಗತಿ ಹಮ್ಮಿಕೊಂಡ ಬಗ್ಗೆ ವಿವರಣೆ ಕೇಳಿದರು. ಡಿಡಿಪಿಐ ಮಾತನಾಡಿ ಈಗಾಗಲೇ ಎಲ್ಲ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ದಿನಕ್ಕೆರಡು ವಿಶೇಷ ತರಗತಿ, ಕಾರ್ಯಾಗಾರ ಹಮ್ಮಿಕೊಂಡು ಅಗತ್ಯವಿರುವ ಎಲ್ಲ ಪರೀಕ್ಷೆಗಳನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದರು. ಎಲ್ಲ ಉಪವಿಭಾಗಾಧಿಕಾರಿಳು ಹಾಗೂ ತಹಸೀಲ್ದಾರರು ತಮ್ಮ ವ್ಯಾಪ್ತಿಯ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವಂತೆ ಸಚಿವರು ಸೂಚಿಸಿದರು. 



 ಬಸವಕಲ್ಯಾಣದಲ್ಲಿ ಗೋಶಾಲೆ ನಿರ್ಮಾಣಕ್ಕೆ ಸರಕಾರವು 50 ಲಕ್ಷ ಅನುದಾನ ನೀಡಿದ್ದು ಆರಂಭಿಸುವAತೆ ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಲಾಯಿತು.
 ಜಿಲ್ಲಾ ಪಂಚಯತ, ತಾಲ್ಲೂಕು ಪಂಚಾಯತ, ಗ್ರಾಮ ಪಂಚಾಯತಗಳಲ್ಲಿ 2023-24ನೇ ಸಾಲಿನ ಎಲ್ಲಾ ಯೋಜನಾ ಕಾರ್ಯಕ್ರಮಗಳನ್ನು ತಪ್ಪದೇ ಮಾರ್ಚ ಒಳಗಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸದರು. ಜಿಲ್ಲಾ ಪಂಚಾಯತನಲ್ಲಿ ಯಾವುದೇ ಕ್ರೀಯಾ ಯೋಜನೆ ಬಾಕಿ ಉಳಿಯದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವಾಹಕ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲವಾದಲ್ಲಿ ಅಧಿಕಾರಿಗಳನ್ನೆ ಜವಾಬ್ದಾರರನ್ನಾಗಿ ಮಾಡಲಾಗುವುದೆಂದು ಸಚಿವರು ತಿಳಿಸಿದರು.
 ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾಇ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಾನತಿ ಎಂ.ಎA., ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಬೀದರ ಸಹಾಯಕ ಆಯುಕ್ತರಾದ ಎಂ.ಡಿ.ಶಖೀಲ್, ಬಸವಕಲ್ಯಾಣ ಸಹಾಯಕ ಆಯಕ್ತರಾದ ಮುಕುಲ್ ಜೈನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

No comments:

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...