ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟರ್ ವಿವಾದಾತ್ಮಕ ಸಂಭ್ರಮಾಚರಣೆ ಮಾಡಿ ಸುದ್ದಿಗೆ ಗ್ರಾಸವಾಗಿದ್ದಾರೆ.
ಹೌದು.. ಇಂದು ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಅರ್ಧಶತಕ ಸಿಡಿಸಿದ ಪಾಕಿಸ್ತಾನದ ಬ್ಯಾಟರ್ ಸಾಹಿಬ್‌ಜಾದಾ ಫರ್ಹಾನ್ (58 ರನ್) ಅರ್ಧಶತಕ ಸಿಡಿಸುತ್ತಲೇ ತನ್ನ ಬ್ಯಾಟ್ ಅನ್ನೇ ಗನ್ ರೀತಿಯಲ್ಲಿ ತೋರಿಸಿ 'Gun-Firing' Celebration ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಫರ್ಹಾನ್ ರ ಈ ಗನ್ ಫೈರ್ ಸಂಭ್ರಮ ಪಾಕಿಸ್ತಾನದಲ್ಲಿ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮಾಡಿದ ಭಾರತೀಯ ಸೇನೆಯನ್ನು ಅಣಕಿಸುವಂತಿತ್ತು. ಅಂದು ರಣಾಂಗಣದಲ್ಲಿ ಪೆಟ್ಟು ತಿಂದಿದ್ದ ಪಾಕಿಸ್ತಾನ ಇಂದು ಮೈದಾನದಲ್ಲಿ ಇಂತಹ ವರ್ತನೆಗಳ ಮೂಲಕ ಭಾರತ ಮತ್ತು ಭಾರತೀಯ ಆಟಗಾರರನ್ನು ಕೆಣಕುವ ಕೆಲಸ ಮಾಡಿದೆ.
ಇನ್ನು ಭಾರತದ ವಿರುದ್ಧ ಉತ್ತಮ ಬ್ಯಾಟಿಂಗ್ ಮಾಡಿದ ಪಾಕ್ ಆರಂಭಿಕ ಬ್ಯಾಟರ್ ಫರ್ಹಾನ್ ಕೇವಲ 45 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 58 ರನ್ ಕಲೆ ಹಾಕಿದರು. ಬಳಿಕ ಶಿವಂದುಬೆ ಬೌಲಿಂಗ್ ನಲ್ಲಿ ಸೂರ್ಯ ಕುಮಾರ್ ಯಾದವ್ ಬೌಲಿಂಗ್ ನಲ್ಲಿ ಔಟ್ ಆದರು.
No comments:
Post a Comment