ads

Search This Blog

Monday, 23 December 2024

ಮೈಲಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ : ರಥೋತ್ಸವ

ಬೀದರ್ - ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ರವಿವಾರ  ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ  ನಡೆಯಿತು. ನಂತರ ರಥೋತ್ಸವ ಜರುಗಿತು. ಅಪಾರ ಭಕ್ತ ಸಮೂಹ ಭಕ್ತಿಪರಾಕಷ್ಟೆ ಮೆರೆದರು. 

ಮೆರವಣಿಗೆಯು ದೇವಸ್ಥಾನದಿಂದ ಹೊರಟು ಗಣೇಶ ಕುಂಡ, ಜ್ಯೋತಿರ್ಲಿಂಗ ದೇವಸ್ಥಾನ, ತೆಪ್ಪದ ಕುಂಡ ಹಾದು ಘಟಮಾರಿ ದೇವಸ್ಥಾನಕ್ಕೆ ತಲುಪಿ ವಗ್ಗೆ ಕಡೆಯಿಂದ ಹಾಡು, ಚಾಬುಕ ನೃತ್ಯ ನಡೆಯಿತು.  ಮಲ್ಲಣ್ಣ ದೇವಸ್ಥಾನಕ್ಕೆ ಆಗಮಿಸಿ ಮಂಗಳಾರತಿಯೊಂದಿಗೆ ಮೆರವಣಿಗೆಯ ಸಮಾಪ್ತಿ ಮಾಡಲಾಯಿತು. 

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ ಮೇತ್ರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ, ವ್ಯವಸ್ಥಾಪಕ ಸಂಜೀವಕುಮಾರ ಸುಂದಾಳ, ಪ್ರಧಾನ ಅರ್ಚಕ ಬಸಪ್ಪ ಹಿರಿವಗ್ಗೆ, ಮಲ್ಲಿಕಾರ್ಜುನ ಹಿರಿವಗ್ಗೆ, ಪ್ರಕಾಶ ಹಿರಿವಗ್ಗೆ ಮತ್ತು ಆಕಾಶ ಹಿರಿವಗ್ಗೆ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು ಕೂಡ ಇದ್ದರು. 

ಜಾತ್ರೆ ನಿಮಿತ್ಯ ಮಹಾರಾಷ್ಟ್ರ ತೇಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ವಿವಿಧ ಕಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಮಲ್ಲಣ್ಣನ ಕೃಪೆಗೆ ಪಾತ್ರರಾದರು.. ಮೆರವಣಿಗೆಯ್ಯೂದಕ್ಕೂ ಭಕ್ತರು ಮಲ್ಲಣ್ಣನ ಜೈಯಘೋಷದೊಂದಿಗೆ ಎಳ್ಳಕೋಟ ಎಳ್ಳಕೋಟಗೆ ಎಂಬ ಜೈಯಿಕಾರ ಹಾಕಿದರು



ತೇಲಂಗಾಣ, ಆಂಧ್ರ ಮತ್ತು ಕರ್ನಾಟಕ ಸೇರಿದಂತೆ ವಿವಿಧ ಕಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. 



Saturday, 21 December 2024

ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ ಐತಿಹಾಸಿಕ ಸ್ಥಳಗಳ ಅನಾವರಣ: ಸಚಿವ ಹೆಚ್.ಕೆ ಪಾಟೀಲ್

ಬೆಂಗಳೂರು : ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕøತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ ಎಂದು  ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.


ಅವರು ಇಂದು ಯಶವಂತಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ 6 ರಲ್ಲಿ ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಗೋಲ್ಡನ್ ಚಾರಿಯೇಟ್ ರೈಲು ಸೇವೆಗಳು 2018 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು ಅದನ್ನು ಮರುಚಾಲನೆಗೊಳಿಸಲಾಗಿದೆ. ಈ ರೈಲಿನ ಮಾಲೀಕತ್ವವನ್ನು 50% ಭಾರತೀಯ ರೈಲ್ವೇ, 25% ಪ್ರವಾಸೋದ್ಯಮ ಸಚಿವಾಲಯ ಭಾರತ ಸರ್ಕಾರ ಹಾಗೂ ಕೆಎಸ್‍ಟಿಡಿಸಿಯ  25% ರಷ್ಟು ಷೇರುಗಳ ಮೂಲಕ ರಾಜ್ಯ ಸರ್ಕಾರ ಹೊಂದಿದೆ. ರೈಲಿನ ಒಳಾಂಗಣವನ್ನು ಕಲಾತ್ಮಕವಾಗಿ ನಿರ್ಮಿಸಲಾಗಿದೆ.

18 ಕೋಚ್‍ಗಳಲ್ಲಿ ಕರ್ನಾಟಕ ಆಳಿದ ರಾಜವಂಶಸ್ಥರುಗಳಾದ ಕದಂಬ, ಹೊಯ್ಸಳ, ವಿಜಯನಗರ ಚಾಲುಕ್ಯರ ಹೆಸರನ್ನು ಇಡಲಾಗಿದೆ. ಊಟ, ವಸತಿಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜೊತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲತೀರಗಳು, ಸಾಂಸ್ಕøತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ. ಇದರಿಂದ ರೈಲು ಹೋಟೆಲ್‍ಗಳು, ಕುಶಲಕರ್ಮಿಗಳು, ಪ್ರವಾಸ ನಿರ್ವಾಹಕರಿಗೆ ಆದಾಯ ಕಲ್ಪಿಸಿದಂತಾಗುತ್ತದೆ. ಈ ವಿಶೇಷ ರೈಲು ಪ್ರವಾಸ ಜಾಗತಿಕ ಮಟ್ಟದಲ್ಲಿ ವಿಶ್ವದ ಏಳು ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಗುರುತಿಸಲಾಗಿದ್ದು, ಹಲವಾರು ಪ್ರಶಸ್ತಿ ಪಡೆದುಕೊಂಡಿದೆ ಎಂದರು.

ಈ ರೈಲಿನಲ್ಲಿ 44 ಸುಸುಜ್ಜಿತ ಕ್ಯಾಬಿನ್‍ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್‍ಗಳು ಭಾರತೀಯ ಮತ್ತು ಅಂತರರಾಷ್ಟ್ರೀಯ ಪಾಕಪದ್ದತಿ ಸೇವೆ ನೀಡುತ್ತದೆ. ಲಾಂಜ್ ಬಾರ್, ಫಿಟ್‍ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ ಎಂದರು.

ಎಲ್ಲೆಲ್ಲಿ ಪ್ರವಾಸ: ಜೂವೆಲ್ ಆಫ್ ಸೌತ್ ಪ್ರವಾಸ ಇದೇ ಡಿಸೆಂಬರ್ 21 ರಿಂದ 26 ರವರೆಗೆ ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚೀಪುರಂ, ಮಹಾಬಲಿಪುರಂ, ತಂಜಾವೂರು, ಕೊಚ್ಚಿನ್, ಮರಾರಿಕುಲಂಗೆ ತೆರಳಿ ನಂತರ ಬೆಂಗಳೂರಿಗೆ ಹಿಂದಿರುಗುತ್ತದೆ. ಇದು ಐದು ದಿನಗಳ ಪ್ರವಾಸವಾಗಿದ್ದು, ಇದಕ್ಕೆ ತಗಲುವ ವೆಚ್ಚ ಒಬ್ಬರಿಗೆ ರೂ 4,07,700/-, ಪ್ರೈಡ್ ಆಫ್ ಕರ್ನಾಟಕ ಪ್ರವಾಸ ದಿನಾಂಕ: 01-02-2025 ರಿಂದ 06-02-2025 ರವರೆಗೆ ಬೆಂಗಳೂರಿನಿಂದ - ನಂಜನಗೂಡು- ಮೈಸೂರು- ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ-ಗೋವಾ- ಬೆಂಗಳೂರನ್ನು ಒಳಗೊಂಡಿದ್ದು ಇದಕ್ಕೆ ತಗಲುವ ವೆಚ್ಚ 2,71,800 ರೂಪಾಯಿಗಳು. ಸೋಜರ್ನ್ ಆಪ್ ಸೌತ್ ಚಾರ್ಟರ್ಡ್ ಪ್ರವಾಸವನ್ನು 29-12-2024 ರಿಂದ 12-02-2025 ರವರೆಗೆ ಆಯೋಜಿಸಲಾಗಿದೆ.

ಭಾರತ ಅದರಲ್ಲೂ ದಕ್ಷಿಣ ಭಾರತದ ಪ್ರವಾಸೋದ್ಯಮವನ್ನು ಜಾಗತಿಕವಾಗಿ ಗುರುತಿಸಲು ಈ ಪ್ರವಾಸವು ಹೆಚ್ಚು ಸಹಕಾರಿಯಾಗಿದೆ. 2029 ರ ವೇಳೆಗೆ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಲು ಕರ್ನಾಟಕ ಭಾರತೀಯ ರಾಜ್ಯಗಳ ಪಟ್ಟಿಯಲ್ಲಿ 3ನೇ ಅಗ್ರಸ್ಥಾನ ಪಡೆಯುವ ಗುರಿ ಸಹ ಹೊಂದಿದೆ. ಅಲ್ಲದೆ ಪ್ರವಾಸಿ ತಾಣದ ಮಹತ್ವವನ್ನು ಜನರಿಗೆ ತಿಳಿಸಲು ಈ ಪ್ರವಾಸ ಹೇಳಿ ಮಾಡಿಸಿದಂತಿದೆ.

ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್, ಕೆಎಸ್‍ಟಿಡಿಸಿ ಅಧ್ಯಕ್ಷ ಎಂ.ಶ್ರೀನಿವಾಸ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಹಿಳೆಯರ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ-ನ್ಯಾ.ಪ್ರಕಾಶ ಬನಸೋಡೆ

ಬೀದರ :- ಸಮಾಜದಲ್ಲಿ ಮಹಿಳೆಯರು ದೇವತೆಗೆ ಸಮಾನ, ಮಹಿಳೆಯರನ್ನು ನಾವು ಗೌರವಿಸಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ 15 ರಿಂದ 20 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಗಿದೆ. ಇಂದಿನ ದಿನಮಾನಗಳಲ್ಲಿ ಗಂಡ ಹೆಂಡತಿಯರ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ವಿವಾಹ ವಿಚ್ಛೇದನಗಳು ಜಾಸ್ತಿಯಾಗುತ್ತಿವೆ. ಮದುವೆಯ ಪಾವಿತ್ರ‍್ಯತೆಯ ಬಗ್ಗೆ ಅವರಿಗೆ ತಿಳುವಳಿಕೆ ಇಲ್ಲ. ಅದರಂತೆ ಮದುವೆಯ ಪವಿತ್ರ ಬಂಧನದ ಬರಿತು ತಿಳಿ ಹೇಳಬೇಕು. ಈ ಕಾಯ್ದೆಯ ಶಿಕ್ಷೆ ಹಾಗೂ ದಂಡದ ಮತ್ತು ಪರಿಹಾರದ ಬಗ್ಗೆ ಮಾಹಿತಿ ನೀಡಿ, ಮಹಿಳೆಯರ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಹೇಳಿದರು.




 ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಸಹಭಾಗೀದಾರ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ "ಕೌಟಿಂಬಿಕೆ ಹಿಂಸೆಯಿ0ದ ಮಹಿಳೆಯರ ಸಂರಕ್ಷಣೆ ಕಾಯ್ದೆ"ಯ ಅನುಷ್ಠಾನದಲ್ಲಿ ಸಹಭಾಗೀದಾರ ಇಲಾಖೆಯ ಪಾತ್ರದ ಕುರಿತಂತೆ ಭಾಗೀದಾರ ಇಲಾಖೆಯ ಅಧಿಕಾರಿಗಳಿಗಾಗಿ ಬೀದರ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರ ಮೈಲೂರದಲ್ಲಿ ಹಮ್ಮಿಕೊಂಡಿದ್ದ ಓರಿಯಂಟೇಷನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ್ ಎಮ್.ಎಸ್. ಅವರು ಮಾತನಾಡಿ, ಇಂದಿನ ದಿನಗಳಲ್ಲಿ ನೈತಿಕ ಶಿಕ್ಷಣ ಮತ್ತು ಸಂಸ್ಕಾರ ಪತನ ಹೊಂದಿರುವುದರಿAದ ಶೇಕಡ 70% ಪ್ರತಿಶತ ಕೌಟುಂಬಿಕ ದೌರ್ಜನ್ಯಗಳು ಮಹಿಳೆಯರ ಮೇಲೆ ನಡೆಯುತ್ತಿವೆ. ಆದ್ದರಿಂದ ದಂಪತಿಗಳಿಗೆ ಆಪ್ತ ಸಮಾಲೋಚನೆ ಆಗಬೇಕು. ನಮ್ಮ ನಮ್ಮ ಮನೆಗಳಲ್ಲಿ ಮಹಿಳೆಯರವನ್ನು ನಾವು ಗೌರವಿಸಬೇಕು. ಸ್ತ್ರೀಯರಿಗೆ ಆಸ್ತಿ ಹಕ್ಕು ಕೊಡಬೇಕು. ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು ಮತ್ತು ಸ್ವಾವಲಂಬಿಯಾಗಬೇಕು. ಅಂದಾಗ ಮಾತ್ರ ಕೌಟುಂಬಿಕ ದೌರ್ಜನ್ಯಗಳು ಕಡಿಮೆಯಾಗುತ್ತ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಶಾರದಾ ಕಲ್ಕಲಕರ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಬೀದರ ಅವರು ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆಯ ಸ್ವರೂಪ, ಕಾಯ್ದೆಯ ಅನುಷ್ಠಾನಕ್ಕಾಗಿ ಸರ್ಕಾರದಿಂದ ಕೈಗೊಂಡಿರುವ ಕಾರ್ಯಕ್ರಮಗಳು, ಅನಿಲಕುಮಾರ ಕರಂಜಿ, ನ್ಯಾಯವಾದಿಗಳು ಬೀದರ ಅವರು ಲಿಂಗ ತಾರತಮ್ಯ ಹಾಗೂ ಮಹಿಳೆಯರ ಮೇಲೆ ಅದರ ಪರಿಣಾಮಗಳು, ಸಮಾಲೋಚನೆ-ದೌರ್ಜನ್ಯ ಎದುರಿಸುತ್ತಿರುವ ಮಹಿಳೆಯರಿಗೆ ಸಮಾಲೋಚನೆ ನೀಡುವ ವಿಧಿ-ವಿಧಾನಗಳು, ಹಣಮಂತರಾವ್ ಸಿಂಧೋಲ್ ಹಿರಿಯ ನ್ಯಾಯವಾದಿಗಳು, ಬೀದರ ಅವರು ನ್ಯಾಯಾಲಯದ ಆದೇಶಗಳ ಅನುಷ್ಠಾನ ಹಾಗೂ ದಂಡಾಧಿಕಾರಿಗಳೊAದಿಗೆ ಸಮನ್ವಯ ಮತ್ತು ಕಾಯ್ದೆಯ ಅನುಷ್ಠಾನದಲ್ಲಿ ಸಂರಕ್ಷಣಾಧಿಕಾರಿಗಳ ಪಾತ್ರ ಮತ್ತು ಕೌಟುಂಬಿಕ ಘಟನಾ ವರದಿ ತಯಾರಿಸುವ ಬಗ್ಗೆ ಮತ್ತು ಬಸವರಾಜ ಬುಳ್ಳಾ, ನ್ಯಾಯಾವಾದಿಗಳು, ಕಾಯ್ದೆಯಡಿ ಕಾನೂನು ಹಾಗೂ ಕಾರ್ಯವಿಧಾನದ ವಿಷಯಗಳು-ಕಾನೂನಿನಡಿ ಮಹಿಳೆಯರಿಗೆ ಲಭ್ಯವಿರುವ ಪರಿಹಾರಗಳು ಮತ್ತು ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಮಾಹಿತಿ, ರೂಪಾ ಎಸ್. ಕೋಟೆಗೌಡರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಬೀದರ ಅವರು ಕಾಯ್ದೆ ಅನುಷ್ಠಾನದಲ್ಲಿ ಇಲಾಖೆಗಳ ಸಮನ್ವಯ, ಕಾಯ್ದೆಯಡಿ ಕಾರ್ಯನಿರತ ರಕ್ಷಣಾ ಗೃಹಗಳು ಮತ್ತು ಸೇವಾದಾತ ಸಂಸ್ಥೆಗಳ ಪಾತ್ರ ಮತ್ತು ಶ್ರೀ ಶಿವರುದ್ರ ಕಾಂಬಳೆ ವಕೀಲರು, ಬೀದರ ಅವರು ಭಾರತ ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ಪರಿಚಯ, ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಗಟ್ಟಲು ಜಾರಿಯಲ್ಲಿರುವ ಕಾಯ್ದೆ ಮತ್ತು ನಿಯಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯವಾದಿಗಳಾದ ಶಿವರಾಜ ಬಿರಾದಾರ, ಮಹಾಂತಪ್ಪ ಹಾಗೂ ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಗುರುರಾಜ ಭಾಗವಹಿಸಿದ್ದರು.

ಈ ತರಬೇತಿಯ ನಿರೂಪಣೆಯನ್ನು ಶ್ರೀ ಗೌರಿಶಂಕರ ಪರತಾಪೂರೆ, ರಕ್ಷಣಾಧಿಕಾರಿಗಳು (ಅಸಾಪೋ) ಜಿಲ್ಲಾ ಮಕ್ಕ ರಕ್ಷಣಾ ಘಟಕ, ಬೀದರ ಅವರು ನಿರ್ವಹಿಸಿದರು. ಹಾಗೂ ಶ್ರೀ. ಗುರುರಾಜ ಜಿಲ್ಲಾ ನಿರೂಪಣಾಧಿಕಾರಿಗಳು, ಮಹಿಳಾ ಮ ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಅವರು ಸ್ವಾಗತ ಕೋರಿದರು.

ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು

 ಬೆಂಗಳೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರ್‌ನ ಮೇಲೆ ಕಂಟೇನರ್‌ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದಾರೆ.


ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಸರ್ಕಾರಿ ಭೂಮಿಯಿಂದ ನೀಲಗಿರಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಮುಂದು

 ಬೆಂಗಳೂರು: ರಾಜ್ಯ ಅರಣ್ಯ ಇಲಾಖೆಯು ಕೇಂದ್ರ ಸರ್ಕಾರದಿಂದ ಅನುಮತಿ ಪಡೆದು ರಾಜ್ಯದಲ್ಲಿರುವ ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿರುವ ಹಳೆಯ ನೀಲಗಿರಿ ಮರಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದೆ.


ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿರುವ ಹಳೆಯ ನೀಲಗಿರಿ ಮರ


ರಾಣೆಬೆನೂರು ಕೃಷ್ಣಮೃಗ ಅಭಯಾರಣ್ಯ ಸೇರಿದಂತೆ ಕೆಲವು ಅರಣ್ಯ ಮತ್ತು ಹುಲ್ಲುಗಾವಲು ಪ್ರದೇಶಗಳಲ್ಲಿ ಈಗಾಗಲೇ ಈ ಪ್ರಕ್ರಿಯೆ ಪ್ರಾರಂಭಿಸಲಾಗಿದೆ, ಈಗ ಇದನ್ನು ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಇತರ ಅರಣ್ಯಗಳು ಮತ್ತು ನಗರಗಳಿಗೆ ವಿಸ್ತರಿಸಲಾಗುವುದು. ನೀಲಗಿರಿ ಮರಗಳನ್ನುಕತ್ತರಿಸುವುದು ಪ್ರತಿ ಅರಣ್ಯ ವಿಭಾಗದ ಕಾರ್ಯಯೋಜನೆಯ ಭಾಗವಾಗಿದೆ. ಇದರಿಂದ ನೈಸರ್ಗಿಕ ಸಸ್ಯವರ್ಗವನ್ನು ಸುಧಾರಿಸುವುದು ಮತ್ತು ಸ್ಥಳೀಯ ಪ್ರಭೇದಗಳಿಗೆ ದಾರಿ ಮಾಡಿಕೊಡಲಾಗುತ್ತದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಅದರ ಸುತ್ತಮುತ್ತಲು ಸುಮಾರು 75 ಎಕರೆಗಳನ್ನು ಗುರುತಿಸಲಾಗಿದೆ. ತುರಹಳ್ಳಿ ಕಿರು ಅರಣ್ಯ ಸೇರಿದಂತೆ ಅರಣ್ಯ ಪ್ರದೇಶದಲ್ಲಿರುವ ಹಳೆಯ ನೀಲಗಿರಿ ಮರಗಳನ್ನು ತೆರವುಗೊಳಿಸಲಾಗುವುದು. ಈ ನಿರ್ಧಾರವನ್ನು ರಾಜ್ಯದ ಹಸಿರು ಹೊದಿಕೆಯ ಭಾಗವೆಂದು ಉಲ್ಲೇಖಿಸಿ ಕೆಲವು ಕಾರ್ಯಕರ್ತರು ವಿರೋಧಿಸಿದ್ದಾರೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಸೇನಾ ಸ್ಮಾರಕಕ್ಕಾಗಿ ನೀಲಗಿರಿ ಮರಗಳನ್ನುಕತ್ತರಿಸಲು ಅರಣ್ಯ ಇಲಾಖೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧಾರ ಕೈಗೊಂಡಾಗ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ನೀಲಗಿರಿ ಮರ ಕತ್ತರಿಸುವುದು ಒಳ್ಳೆಯ ಕೆಲಸವಾಗಿದೆ ಅನೇಕ ಪರಿಸರ ಸಂರಕ್ಷಣಾಕಾರರು ತಿಳಿಸಿದ್ದಾರೆ. 1950ರ ದಶಕದಲ್ಲಿ ವಿದೇಶಿ ಕೈಗಾರಿಕೋದ್ಯಮಿ ಯೊಬ್ಬರು ನೀಲಗಿರಿಯನ್ನು ನೆಡಲು ಸರ್ಕಾರಕ್ಕೆ ಸೂಚಿಸಿದರು. ನೀಲಗಿರಿ ಮರ ವೇಗವಾಗಿ ಬೆಳೆಯುತ್ತಿರುವ ಜಾತಿಯಾಗಿದೆ.ಪೇಪರ್, ಮತ್ತು ರೇಯಾನ್ ಕಾರ್ಖಾನೆಯ ಬೇಡಿಕೆಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದು 1950ರ ದಶಕದಲ್ಲಿ ನೀಲಗಿರಿ ಮರಗಳನ್ನು ದೇಶದಲ್ಲಿ ಪರಿಚಯಿ ಸಲಾಯಿತು ಎಂದು ಖ್ಯಾತ ಪರಿಸರವಾದಿ ಮತ್ತು ಮಾಜಿ ಅರಣ್ಯ ಅಧಿಕಾರಿ ಎಎನ್ ಯಲ್ಲಪ್ಪ ರೆಡ್ಡಿ ಹೇಳಿದರು. ಬಿದಿರಿನ ಬದಲಾಗಿ ನೀಲಗಿರಿಯನ್ನು ಉತ್ತೇಜಿಸ ಲಾಯಿತು, ಇದನ್ನು ನಿಧಾನವಾಗಿ ಬೆಳೆಯುವ ಜಾತಿ ಎಂದು ಕರೆಯಲಾಯಿತು, ಅದರ ಪರಿಸರ ಮೌಲ್ಯವನ್ನು ಕಡಿಮೆ ಮಾಡುತ್ತದೆ.

17ನೇ ಶತಮಾನದಲ್ಲಿ ನಂದಿ ಬೆಟ್ಟದಲ್ಲಿ ನೀಲಗಿರಿಯನ್ನು ಪರಿಚಯಿಸಲಾಯಿತು. ಇದರ ನಂತರದ ಹೈಬ್ರಿಡ್ ತಳಿಯನ್ನು ಮೈಸೂರು ಹೈಬ್ರಿಡ್ ಎಂದು ಕರೆಯ ಲಾಯಿತು, ಇದನ್ನು ರಾಜ್ಯ ಸರ್ಕಾರವು ಉತ್ತೇಜಿಸಿದ್ದರಿಂದ ರೈತರು ತ್ವರಿತ ಲಾಭಕ್ಕಾಗಿ ಬೆಳೆಯಲು ಪ್ರಾರಂಭಿಸಿದರು ಎಂದು ರೆಡ್ಡಿ ಹೇಳಿದ್ದಾರೆ.

“ಕಾಲಾನಂತರದಲ್ಲಿ, ಇದು ಯಾವುದೇ ಹುಲ್ಲು, ಯಾವುದೇ ಮಣ್ಣಿನ ಪುನರುಜ್ಜೀವನ ಮತ್ತು ಮಣ್ಣಿನಲ್ಲಿ ಹ್ಯೂಮಸ್ಗೆ ಕಾರಣವಾಗುವುದಿಲ್ಲ ಎಂಬುದು ತಿಳಿಯಿತು. ನೀಲಗಿರಿ ಮರಗಳು ಎಲ್ಲಾ ನೀರನ್ನು ಹೀರಿಕೊಳ್ಳುತ್ತವೆ ಮತ್ತು ಅಂತರ್ಜಲದ ಮೇಲೆ ಪರಿಣಾಮ ಬೀರುತ್ತವೆ, ಇದು ಪರಿಸರ ವ್ಯವಸ್ಥೆಗೆ ಒಳ್ಳೆಯದಲ್ಲ ಎಂಬುದನ್ನು ಮನಗಂಡ ಅರಣ್ಯ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದರು.

ಭೀಕರ ಅಗ್ನಿ ಅವಘಡ: ಒಂದೇ ಕುಟುಂಬದ 4 ಸಜೀವ ದಹನ

 ದೇವಾಸ್: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಭಾರೀ ಅಗ್ನಿ ಅವಘ ಸಂಭವಿಸಿದ್ದು, ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ಶನಿವಾರ ನಡೆದಿದೆ.


ನಯಾಪುರ ಪ್ರದೇಶದ ಮೂರು ಅಂತಸ್ತಿನ ಮನೆಯಲ್ಲಿ ಇಂದು ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಸ್ವಲ್ಪ ಸಮಯದೊಳಗೆ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನು ಆವರಿಸಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಮನೆಯಲ್ಲಿ ಇರಿಸ ಲಾಗಿದ್ದ ಸಿಲಿಂಡರ್ ಕೂಡ ಸ್ಫೋಟಗೊಂಡಿದೆ. ಸ್ಫೋಟದ ಸದ್ದು ಇಡೀ ಪ್ರದೇಶಕ್ಕೆ ಪ್ರತಿಧ್ವನಿಸಿದೆ.

ಸ್ಫೋಟದ ಸದ್ದಿನಿಂದ ಅಕ್ಕಪಕ್ಕದವರು ಎಚ್ಚೆತ್ತುಕೊಂಡು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. 3 ಗಂಟೆಗಳ ಪ್ರಯತ್ನದ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಆದರೆ, ಈ ದುರಂತದಲ್ಲಿ ಮನೆಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತರನ್ನು ದಿನೇಶ್ ಕಾರ್ಪೆಂಟರ್ (35), ಗಾಯತ್ರಿ ಕಾರ್ಪೆಂಟರ್ (30), ಇಶಿಕಾ (10) ಮತ್ತು ಚಿರಾಗ್ (7) ಎಂದು ಗುರ್ತಿಸಲಾಗಿದೆ. ಮೃತ ದಿನೇಶ್ ಅವರು ಕಟ್ಟಡದ ನೆಲ ಮಹಡಿಯಲ್ಲಿ ಡೈರಿ ನಡೆಸುತ್ತಿದ್ದರು, ಎರಡನೇ ಮಹಡಿಯಲ್ಲಿ ಕುಟುಂಬ ದೊಂದಿಗೆ ವಾಸವಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪುನೀತ್ ಗೆಹ್ಲೋಟ್ ಹೇಳಿದ್ದಾರೆ.

43 ವರ್ಷಗಳ ಬಳಿಕ ಭಾರತದ ಪ್ರಧಾನಿ ಕುವೈತ್'ಗೆ ಭೇಟಿ

 ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಗಲ್ಫ್‌ ರಾಷ್ಟ್ರ ಕುವೈತ್‌ಗೆ ಪ್ರವಾಸ ಕೈಗೊಂಡಿದ್ದು, ಇದು 43 ವರ್ಷಗಳ ಬಳಿಕ ಪಶ್ಚಿಮ ಏಷ್ಯಾ ರಾಷ್ಟ್ರಕ್ಕೆ ಭಾರತದ ಪ್ರಧಾನಿ ನೀಡುತ್ತಿರುವ ಮೊದಲ ಭೇಟಿಯಾಗಿದೆ.


ಪ್ರಧಾನಮಂತ್ರಿ ನರೇಂದ್ರ ಮೋದಿ

ಕುವೈತ್‌ನ ಅಮೀರ್, ಶೇಖ್‌ ಮಿಶಾಲ್‌ ಅಲ್‌ ಅಹ್ಮದ್‌ ಅಲ್‌ ಜಬೇರ್‌ ಅಲ್‌ ಸಬ್ಹಾ ಅವರ ಆಹ್ವಾನದ ಮೇರೆಗೆ ಮೋದಿ ಕುವೈತ್‌ಗೆ ತೆರಳುತ್ತಿದ್ದಾರೆ. ಭೇಟಿ ವೇಳೆ ಮೋದಿಯವರು ಅಲ್ಲಿನ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ ಜೊತೆಗೆ ಕುವೈತ್‌ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಭೇಟಿಯು ಭಾರತ ಮತ್ತು ಕುವೈತ್‌ ನಡುವಿನ ಬಹುಮುಖಿ ಸಂಬಂಧವನ್ನು ಬಲಪಡಿಸಲು ನೆರವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.

ಕುವೈತ್‌ನಲ್ಲಿಂದು ನಡೆಯುವ ʻಹಾಲಾ ಮೋದಿ ಮೆಗಾ ಡಯಾಸ್ಪೊರಾʼ ಕಾರ್ಯಕ್ರಮಕ್ಕೆ ಈಗಾಗಲೇ ವೇದಿಕೆ ಸಿದ್ಧಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಸುಮಾರು 5,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ಉಭಯ ರಾಷ್ಟ್ರಗಳ ದ್ವಿಪಕ್ಷಿಯ ಸಂಬಂಧ ಮತ್ತಷ್ಟು ಅಭಿವೃದ್ಧಿಪಡಿಸುವ ಸಲುವಾಗಿ ಮೋದಿ ಭೇಟಿ ನೀಡುತ್ತಿದ್ದಾರೆ. ಮೊದಲು ಬಯಾನ್ ಅರಮನೆಯಲ್ಲಿ ಗೌರವಾನ್ವಿತ ಗೌರವ ಸ್ವೀಕರಿಸಲಿದ್ದಾರೆ. ಬಳಿಕ ಕುವೈತ್ ನಾಯಕತ್ವದೊಂದಿಗೆ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಹಾಗೂ ಇದಕ್ಕಾಗಿ ಉಭಯ ರಾಷ್ಟ್ರಗಳು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ. ನಂತರ ಔತಣಕೂಟದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಅರಣು ಕುಮಾರ್ ಚಟರ್ಜಿ ಮಾಹಿತಿ ನೀಡಿದ್ದಾರೆ,

ಪ್ರಧಾನಿಗಳ ಈ ಭೇಟಿಯು ಭವಿಷ್ಯದಲ್ಲಿ ಉತ್ತಮ ಸಹಕಾರಕ್ಕಾಗಿ ಹೊಸ ಮಾರ್ಗಗಳನ್ನು ಸೃಷ್ಟಿಸುತ್ತದೆ. ಭಾರತ ಮತ್ತು ಗಲ್ಫ್‌ ಸಹಕಾರ ಮಂಡಳಿಯ ನಡುವಿನ ಬಾಂಧವ್ಯ ಹೆಚ್ಚಿಸುತ್ತದೆ. ಮುಖ್ಯವಾಗಿ, ಭಾರತ ಸರ್ಕಾರವು ವಿದೇಶದಲ್ಲಿರುವ ಎಲ್ಲಾ ಕಾರ್ಮಿಕರ ಕಲ್ಯಾಣಕ್ಕೆ ಪ್ರಾಮುಖ್ಯತೆ ನೀಡುತ್ತಲೇ ಇದೆ. ಕುವೈತ್‌ನಲ್ಲಿ ಸದ್ಯ 10 ಲಕ್ಷ ಭಾರತೀಯರು ಇದ್ದಾರೆ. ಈ ಕಾರಣಕ್ಕಾಗಿ ಅಲ್ಲಿನ ಕಾರ್ಮಿಕ ಸಮುದಾಯಕ್ಕೂ ಭೇಟಿ ನೀಡಿವ ಯೋಜನೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿಯವರು ಕೂಡ ಸಾಮಾಜಿಕ ಜಾಲತಾಣದ ಲ್ಲಿ ಪೋಸ್ಟ್ ಮಾಡಿ, ಕುವೈತ್'ಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಇಂದು ಮತ್ತು ನಾಳೆ ನಾನು ಕುವೈತ್‌ಗೆ ಭೇಟಿ ನೀಡುತ್ತಿದ್ದೇನೆ. ಈ ಭೇಟಿಯು ಕುವೈತ್‌ನೊಂದಿಗಿನ ಭಾರತದ ಐತಿಹಾಸಿಕ ಸಂಬಂಧವನ್ನು ಗಾಢವಾಗಿಸುತ್ತದೆ. ಕುವೈತ್‌ನ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನ ಮಂತ್ರಿ ಅಮೀರ್ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ. ಇಂದು ಸಂಜೆ, ನಾನು ಕುವೈತ್ನಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದೇನೆ ಮತ್ತು ಅರೇಬಿಯನ್ ಗಲ್ಫ್ ಕಪ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತೇನೆಂದು ಹೇಳಿದ್ದಾರೆ.

ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ...!

  ಪ್ರೇಮ ಕಾಶ್ಮೀರದಲ್ಲಿ ರಕ್ತದೋಕುಳಿ; ಹಿಂದೂಗಳೇ ಟಾರ್ಗೆಟ್. ಭೂಲೋಕದ ಸ್ವರ್ಗವೆಂದೇ ಕರೆಯುವ ಜಮ್ಮು-ಕಾಶ್ಮೀರದ ಪೆಹಲ್ಗಾಮ್ ಸಮೀಪದ ಬೈಸರನ್ ಹುಲ್ಲುಗಾವಲಿನಲ್ಲಿ ಪಾಕ್ ಪ್...